ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ತಗ್ಗು ಪ್ರದೇಶ, ನದಿ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು ಅಗತ್ಯ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದವರು ತಿಳಿಸಿದ್ದಾರೆ.