ಸಿಯೋಲ್ (ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾ ದೇಶದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನ ದುರಂತಕ್ಕೀಡಾಗಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಿಂದ ಪಲ್ಟಿಯಾಗಿದೆ. ಆ ಕೂಡಲೇ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಕನಿಷ್ಠ 62 ಜನರು ಮೃತಪಟ್ಟಿರುವ ಬಗ್ಗೆ ಪ್ರಾಥಮಿಕ ವರದಿಗಳು ತಿಳಿಸಿವೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದೆ.