ಮಂಗಳೂರು: ದಪ್ಪ ಇದ್ದೀನಿ ಎಂದು ನೊಂದುಕೊಂಡ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿಯ ಹಾಸ್ಟೆಲ್ ಆವರಣದಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3 ಗಂಟೆ ಸುಮಾರಿಗೆ MBBS ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಪ್ರಕೃತಿ (20) ಎಂದು ಗುರುತಿಸಲಾಗಿದೆ.
ಪ್ರಕರಣ ದಾಖಲಿಸಿರುವ ಕದ್ರಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.