ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಅನ್ಯಾಯವಾಗಿದ್ದರೆ ಸರಿಪಡಿಸುತ್ತೇವೆ. ಆದರೆ ಕಾನೂನಿನಂತೆ ನಡೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವದ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಭಾಗಿಯಾದರು. ಜನರನ್ನುದ್ದೇಶಿಸಿ ಅವರು ಭಾಷಣ ಮಾಡಿದ ವೇಳೆ ಜನಸ್ತೋಮದ ನಡುವೆ ಡಿ ಬಾಸ್, ಡಿ ಬಾಸ್ ಎಂಬ ಘೋಷಣೆ ಮೊಳಗಿತು. ಈ ವೇಳೆ ದರ್ಶನ್ ಬಗ್ಗೆ ಮಾತನಾಡಿದ ಶಿವಕುಮಾರ್, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಭೇಟಿಗೆ ಸಮಯ ಕೇಳಿದ್ದಾರೆ. ಬುಧವಾರ ಭೇಟಿಗೆ ಅವಕಾಶ ನೀಡಿದ್ದೇನೆ ಎಂದರು.
ದರ್ಶನ್‌ಗೆ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇವೆ ಎಂದ ಅವರು, ನಾವು ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು ಎಂದೂ ಪ್ರತಿಪಾದಿಸಿದರು.