ದಾವಣೆಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ ರಾಕೇಶ್ (30), ದೇವರಾಜ್ (27) ಹಾಗೂ ಹರಮಘಟ್ಟ ಗ್ರಾಮದ ನಂಜುಂಡಪ್ಪ (83) ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, .ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.






















































