ಚಿತ್ರದುರ್ಗ: ಮಧ್ಯಕರ್ನಾಟಕದ ಪ್ರಸಿದ್ದ ಮಠ ಶ್ರೀ ಮುರುಘಾರಾಜೇಂದ್ರ ಬೃಹನ್ಮಠದ ಧಾರ್ಮಿಕ ಕಾರ್ಯಕ್ರಮಗಳ ಹೊಣೆಯನ್ನು ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ವಹಿಸಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಪೂಜಾ, ಸೇವಾ, ಧಾರ್ಮಿಕ ಕೈಂಕರ್ಯ ನಡೆಸಿಕೊಂಡು ಹೋಗಲು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಕ ಮಾಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
























































