ಹೈದರಾಬಾದ್: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಸಾಧಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟದ ಜಯದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪಾತ್ರವಿದೆ ಎಂದೂ ಅವರು ಹೇಳಿದ್ದಾರೆ.
ಇದೇ ವೇಳೆ, ಆಂದ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.






















































