ಬೆಂಗಳೂರು: ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ ಎಂದಿರುವ ಸಿದ್ದರಾಮಯ್ಯ, ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ಅವರು ವಿಸ್ವಾಸ ವ್ಯಕ್ತಪಡಿಸಿದ್ದಾರೆ. .


























































