ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ ದೆಹಲಿ ಚಲೋ ಘೋಷಿಸಿದ್ದಾರೆ.
ಎಂಎಸ್ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತರು ಡಿಸೆಂಬರ್ 6 ರಂದು ದೆಹಲಿ ಚಲೋ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರು ಘೋಷಿಸಿದ್ದಾರೆ
ಚಂಡೀಗಢದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ದೆಹಲಿಯಲ್ಲಿ ಬೃಹತ್ ರ್ಯಾಲಿ ನಡೆಸಲಾಗುತ್ತದೆ ಎಂದು ರೈತ ನಾಯಕರು ತಿಳಿಸಿದ್ದಾರೆ.