ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಮಧ್ಯಂತರ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಕುರಿತಂತೆ ಸೋಮವಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ, ಪ್ರಕರಣದ ತನಿಖೆಯು ಪ್ರಗತಿಯಲ್ಲಿರುವುದರಿಂದ ಈ ಹಂತದಲ್ಲಿ ಮಧ್ಯಂತರ ಜಾಮೀನು ನೀಡುವುದು ಸರಿಯಲ್ಲ ಎಂದು ಹೇಳಿತಲ್ಲದೆ, ಕವಿತಾ ಅವರ ಮನವಿಯನ್ನು ತಳ್ಳಿಹಾಕಿತು.
46 ವರ್ಷದ ಕವಿತಾ ಅವರನ್ನು ಮಾರ್ಚ್ 15ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು.