ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಈ ಕುರಿತಂತೆ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು. .
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ತಿಳಿಸಿದರು.
ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದ ಸಿಎಂ, ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದು ತಿಳಿಸಿದರು.
1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು ಎಂದವರು ತಿಳಿಸಿದರು.
ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ ಎಂದ ಸಿಎಂ, ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ತಿಳಿಸಿದರು.
ಇಂದು ನನ್ನ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ನನ್ನ ಮಾತುಗಳು:
• ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ… pic.twitter.com/iFRx9ExDPc
— Siddaramaiah (@siddaramaiah) July 15, 2025