ಬೆಂಗಳೂರು; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.
“ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು” ಎಂದರು.