ಬೆಂಗಳೂರು: ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಇಡೀ ದೇಶದ ಗಮನಸೆಳೆದಿದೆ. ಕಾರ್ಪೊರೇಟ್ ಸಂಸ್ಥೆಗಳು ನಡೆಸುವ ಶಾಲೆಗಳಿಗಿಂತಲೂ ಹೆಚ್ಚಿನ ಅಭಿವೃದ್ಧಿಯನ್ನು ಈ ಕ್ಕ್ಷೇತ್ರದ ಶಾಲೆಗಳು ಕಂಡಿವೆ. ಈ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಾಸಕರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಇತಿಹಾಸದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಅಭಿವೃದ್ಧಿಯ ಕ್ರಾಂತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ಕ್ರಾಂತಿ!
ಮುಖ್ಯಮಂತ್ರಿ ಶ್ರೀ @siddaramaiah ಹಾಗೂ ಉಪಮುಖ್ಯಮಂತ್ರಿ ಶ್ರೀ @DKShivakumar ಅವರಿಂದ ಶ್ಲಾಘನೆ. #GovernmentSchools #BTMLayout #Siddaramaiah #RamalingaReddy pic.twitter.com/6wglEMsolm
— Ramalinga Reddy (@RLR_BTM) May 31, 2025

































































