ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.
ಕಾಂಗ್ರೆಸ್ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.
 
	    	



















































