ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು.
ಈ ಸಂಬಂಧ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯ ನಡುವೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರೂ ಸೇರ್ಪಡೆಗೊಂಡು ಹೋರಾಟ ತೀವ್ರಗೊಳಿಸಿದರು.
ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಪರಿಣಾಮ, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ–ನೂಕಾಟ ನಡೆಯಿತು.
ರಾಜ್ಯ ಸರ್ಕಾರವು ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯುವಜನರ ಅಸಮಾಧಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
Massive protest in dharwad by job aspirants against the govt. The protestors took to the streets demanding that the government fill vacant government posts. BJP leaders also backed these protests that saw normal life being brought to a standstill in some parts of dharwad. pic.twitter.com/CLMJJc7Nx0
— Deepak Bopanna (@dpkBopanna) February 24, 2026
















































