ಬೆಂಗಳೂರು: ರಾಜಧಾನಿಯ ನಗರ್ತಪೇಟೆ ಗಲಾಟೆಗೆ ಹಠಾತ್ ತಿರುವು ಸಿಕ್ಕಿದೆ. ಮೊಬೈಲ್ ಅಂಗಡಿ ಮಾಲೀಕನ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.
ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಘಟನೆ ನಡೆದಿರುವುದರಿಂದ ಚುನಾವಣಾ ಆಯೋಗ ಮಧ್ಯಪ್ರವೇಶಿಸಿದೆ. ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೆಂಗಳೂರು ಹಲಸೂರುಗೇಟ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




























































