ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ನಡೆದ ಕಲ್ಲುತೂರಾಟ ಮತ್ತು ಗಲಭೆ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯನ್ನು ರಚಿಸಿದೆ.
ಶಾಸಕರಾದ ಡಾ. ಸಿ. ಎನ್.ಅಶ್ವತ್ಥ ನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಅವರನ್ನೊಳಗೊಂಡ ಸಮಿತಿಯನ್ನು ಪಕ್ಷ ರಚಿಸಿದೆ.
ಈ ಸಮಿತಿಯು ಗಲಭೆ ನಡೆದಿರುವ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಲಿದೆ. ಒಂದು ವಾರದಲ್ಲಿ ಈ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.