ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ನೋಟ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನೂ ನಿಂಬಾಳ್ಕರ್ ಅವರಿಗೆ ವಹಿಸಲಾಗಿದೆ.
ಈವರೆಗೂ ಗುಪ್ತದಳದ ಮುಖ್ಯಸ್ಥರಾಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.




















































