ಬೆಂಗಳೂರು: ವಾಲ್ಮಿಕಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದ ಮಾತ್ರಕ್ಕೆ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ರಾಜ್ಯದ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ನಾಗೇಂದ್ರ ಬಂಧನಕ್ಕೆ ನಮ್ಮಹೋರಾಟ ಸೀಮಿತವಾಗಿಲ್ಲ ಎಂದಿದ್ದಾರೆ.
ವಾಲ್ಮಿಕಿ ಹಗರಣದಲ್ಲಿ ದೊಡ್ಡ ದೊಡ್ಡ ಕುಳಗಳ ಪಾತ್ರವಿದೆ. ಅವೆಲ್ಲವೂ ಬಯಲಾಗಬೇಕಿದೆ. ಆವರೆಗೂ ಹೋರಾಟ ನಿಲ್ಲದು ಎಂದು ವಿಜಯೇಂದ್ರ ತಿಳಿಸಿದ್ದಾರೆ.