ಬೆಂಗಳೂರು:ಹೋಟೆಲ್, ಅಂಗಡಿ ಸೇರಿದಂತೆ ಎಲ್ಲಾ ವ್ಯಾಪಾರಿ ಕೇಂದ್ರಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯದ ಗಡುವನ್ನು ಎರಡು ವಾರ ಕಾಲ ವಿಸ್ತರಿಸಲಾಗಿದೆ.
ಬೆಂಗಳೂರಿಗೆ ಅನ್ವಯವಾಗುವ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ಕಡ್ಡಾಯಗೊಳಿಸಲಾಗಿದ್ದು, ನಿಯಮಬದ್ಧ ಫಲಕ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ಗುರುವಾರ ಎರಡು ವಾರಗಳವರೆಗೆ ವಿಸ್ತರಿಸಿದೆ.
ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.