ನವದೆಹಲಿ: ಹೈಕಮಾಂಡ್ ಮುಖಂಡರನ್ನು ಸೌಹಾರ್ದ ಭೇಟಿ ಮಾಡಿದ್ದೇವೆಯೇ ಹೊರತು ನಾಯಕತ್ವ ವಿಚಾರಕ್ಕಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ ಎಂದರು. “ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅವಶ್ಯಕತೆ ಇಲ್ಲ” ಎಂದರು.
ಬಹಳ ವರ್ಷಗಳ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಇದು ಸುಳ್ಳು, ನಾವು ಭೇಟಿಯಾಗಿದ್ದಾಗ ಹೇಳಿಕೊಳ್ಳುವುದಿಲ್ಲ” ಎಂದರು. ಈ ಬಾರಿಯ ಭೇಟಿಯಲ್ಲಿ ನಿಮಗೆ ಅಭಯ ಸಿಕ್ಕಿದೆಯಂತೆ, ಸಮಸ್ಯೆ ಬಗೆಹರಿಯಲಿದೆ ಎಂದು ಕೇಳಿದಾಗ, “ನಿಮ್ಮ ಅರ್ಥ ಏನಿದೆಯೋ, ನನಗೆ ಯಾವ ಸಮಸ್ಯೆ ಇಲ್ಲ. ನೀವು (ಮಾಧ್ಯಮಗಳು) ಸಮಸ್ಯೆ ಸೃಷ್ಟಿಸುತ್ತಿದ್ದೀರಿ” ಎಂದು ಹೇಳಿದರು.






















































