ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್ ಚಂದ್ರಶೇಖರ್ ವಿಧಿವಶರಾಗಿದ್ದಾರೆ.
ಡಾ.ರಾಜಕುಮಾರ್ ಅವರು ನಟಿಸಿದ “ಹುಲಿ ಹಾಲಿನ ಮೇವು”, “ಬಬ್ರುವಾಹನ” ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ಮಿಸಿದ್ದ ಅವರು, ಅನೇಕ ಚಿತ್ರಗಳನ್ನು ವಿತರಣೆ ಮಾಡಿದ್ದರು. ಅಲ್ಲದೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿದ್ದರು.
ಕೆಸಿಎನ್ ಚಂದ್ರಶೇಖರ್ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಂತಾಪ ಸೂಚಿಸಿದ್ದಾರೆ. ಅವರ ನಿಧನ ನೋವುಂಟು ಮಾಡಿದೆ. ಅವರ ಕುಟುಂಬಕ್ಕೆ, ಚಿತ್ರರಂಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಿ ಹಾಗೂ ಅಗಲಿದ ಹಿರಿಯ ಜೀವಕ್ಕೆ ಚಿರಶಾಂತಿ ಸಿಗಲಿ ಎಂದು ಡಿಸಿಎಂ ಪ್ರಾರ್ಥಿಸಿದ್ದಾರೆ.