ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ವೈರಾಣು ಹಾವಳಿ ಜನರ ನಿದ್ದೆಗೆಡಿಸಿದೆ. ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿಗಳನ್ನು ಪ್ರಕಟಿಸಿದೆ. ಶುಕ್ರವಾರ ಆದೇಶ ಹೊರಡಿಸುರುವ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.
ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿಗಳು, ಕಾರ್ಖಾನೆಗಳು, ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದೆ. ವಾಹನಗಳಲ್ಲಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಹೇಳಿದೆ.











































































