ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನೀಟ್-ಯುಜಿ 2026 ಪರೀಕ್ಷೆಯ ಅಕ್ರಮಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕಿ, “ಮತ್ತೊಮ್ಮೆ ನೀಟ್-ಯುಜಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳ ವರದಿಗಳು ಬೆಳಕಿಗೆ ಬರುತ್ತಿವೆ” ಎಂದು ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಭ್ರಷ್ಟಾಚಾರದಿಂದ ಸುಮಾರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ಅವರು ಟೀಕಿಸಿದ್ದಾರೆ.
“ನೀಟ್ನಂತಹ ಪರೀಕ್ಷೆಗಳಿಗೆ ಮಕ್ಕಳು ಅಪಾರ ಶ್ರಮ ಪಡುತ್ತಾರೆ. ಪೋಷಕರು ಕೂಡ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಸಂಪೂರ್ಣ ಶಕ್ತಿ ಹೂಡಿಕೆ ಮಾಡುತ್ತಾರೆ. ಆದರೆ ಪ್ರತಿಯೊಂದು ಪರೀಕ್ಷೆಯೂ ಭ್ರಷ್ಟಾಚಾರಕ್ಕೆ ಬಲಿಯಾಗುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
<blockquote class=”twitter-tweet”><p lang=”hi” dir=”ltr”>एक बार फिर से NEET UG की परीक्षा में बड़े पैमाने पर गड़बड़ी को लेकर खबरें छप रही हैं। भाजपा राज में पिछले कई साल से परीक्षाओं में व्याप्त भ्रष्टाचार देश के युवाओं से उनका भविष्य छीन रहा है। इस बार भी तकरीबन 23 लाख छात्रों के भविष्य के साथ खिलवाड़ किया गया। <br><br>NEET जैसी परीक्षाओं…</p>— Priyanka Gandhi Vadra (@priyankagandhi) <a href=”https://twitter.com/priyankagandhi/status/2053800017862001122?ref_src=twsrc%5Etfw”>May 11, 2026</a></blockquote> <script async src=”https://platform.twitter.com/widgets.js” charset=”utf-8″></script>
ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಕಾನೂನುಗಳ ಪರಿಣಾಮಕಾರಿತ್ವವನ್ನೂ ಅವರು ಪ್ರಶ್ನಿಸಿದ್ದಾರೆ. “ನೆಲಮಟ್ಟದಲ್ಲಿ ಅಕ್ರಮಗಳು ಮುಂದುವರಿದರೆ ಸಂಸತ್ತಿನಲ್ಲಿ ಕಠಿಣ ಕಾನೂನು ತಂದು ಏನು ಪ್ರಯೋಜನ?” ಎಂದು ಪ್ರಶ್ನಿಸಿದರು.
ಯುವಕರ ಭವಿಷ್ಯದ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜವಾಬ್ದಾರರಾಗಬೇಕು ಎಂದು ಆಗ್ರಹಿಸಿದ ಅವರು, “ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ಈ ಚಕ್ರ ಇನ್ನೆಷ್ಟು ಕಾಲ ಮುಂದುವರಿಯಲಿದೆ?” ಎಂದು ಪ್ರಶ್ನಿಸಿದ್ದಾರೆ.







































































