ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
– @DKShivakumar pic.twitter.com/yPgqOHXRu0— Karnataka Congress (@INCKarnataka) February 26, 2025
ಜಲಾಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ… pic.twitter.com/nKEKETnd8v
— Karnataka Congress (@INCKarnataka) February 26, 2025
ರಾಜ್ಯದ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.