ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಶಿಕ್ಷಕರ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ನೂತನ ವಿಧಾನ ಪರಿಷತ್ ಸದಸ್ಯರುಗಳು ಪ್ರಮಾಣವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯರಾಗಿ ಬಸವರಾಜ್ ಹೊರಟ್ಟಿ , ಪ್ರಕಾಶ್ ಹುಕ್ಕೇರಿ , ಹನುಮಂತ ನಿರಾಣಿ, ಮಧು ಮಾದೇಗೌಡ ಅವರು ಪರಿಷತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ , ಸಚಿವ ಹಾಗೂ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಚಿವ ಹಾಲಪ್ಪ ಆಚಾರ್, ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.