ಬೆಳಗಾವಿ: ನ್ಯಾಷನಲ್ ಹೆರಾಲ್ಡ್–ಯಂಗ್ ಇಂಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿತು.
ಸುವರ್ಣ ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಮುನಿಯಪ್ಪ, ಬೋಸರಾಜು, ಎಂ.ಸಿ. ಸುಧಾಕರ್, ಬೈರತಿ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿದಂತೆ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.






















































