ಧರ್ಮಶಾಲಾ: ಐಪಿಎಲ್ 2026 ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ವಿರುದ್ಧ 23 ರನ್‌ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್‌ಗೆ ಪ್ರವೇಶಿಸಿದೆ.
ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಪೇರಿಸಿತು. ವಿರಾಟ್ ಕೊಹ್ಲಿ (Virat Kohli) 58 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ (Devdutt Padikkal) 45 ರನ್ ಬಾರಿಸಿದರು. ಟಿಮ್ ಡೇವಿಡ್ (Tim David) 28 ರನ್ ಸೇರಿಸಿದರು. ಅಂತಿಮ ಹಂತದಲ್ಲಿ ವೆಂಕಟೇಶ್ ಅಯ್ಯರ್ (Venkatesh Iyer) ಅಜೇಯ 73 ರನ್ ಸಿಡಿಸಿ ತಂಡದ ಮೊತ್ತವನ್ನು ಬೃಹತ್ ಮಟ್ಟಕ್ಕೆ ಕೊಂಡೊಯ್ದರು.
223 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ಆರಂಭದಿಂದಲೇ ಒತ್ತಡಕ್ಕೆ ಸಿಲುಕಿತು. ಕೋಪರ್ ಕೊನೋಲಿ (Cooper Connolly) 37, ಸೂರ್ಯಾಂಷ್ ಷೆಡ್ಗೆ (Suryansh Shedge) 35, ಮಾರ್ಕಸ್ ಸ್ಟೋಯ್ನಿಸ್ (Marcus Stoinis) 37 ಹಾಗೂ ಶಶಾಂಕ್ ಸಿಂಗ್ (Shashank Singh) 56 ರನ್ ಗಳಿಸಿ ಹೋರಾಟ ನಡೆಸಿದರು. ಆದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ನಿಗದಿತ 20 ಓವರ್‌ಗಳಲ್ಲಿ ಪಂಜಾಬ್ 8 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಆರ್‌ಸಿಬಿ 23 ರನ್‌ಗಳ ಗೆಲುವು ದಾಖಲಿಸಿತು.
ಈ ಜಯದೊಂದಿಗೆ ಐಪಿಎಲ್ 2026 ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಕೀರ್ತಿಗೂ ಆರ್‌ಸಿಬಿ ಪಾತ್ರವಾಯಿತು.






















































