ಮಂಗಳೂರು: ಕರಾವಳಿ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈವರೆಗೂ ವಲಯದ ಮುಖ್ಯಸ್ಥರಾಗಿದ್ದ ಚಂದ್ರಮೋಹನ್ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಅಮಿತ್ ಸಿಂಗ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿತ್ತು.
ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಉಡುಪಿ ಪೊಲೀಸ್ ವರಿಷ್ಠ ಡಾ. ಅರುಣ್ ಕುಮಾರ್ ಉಪಸ್ಥಿತಿಯಲ್ಲಿ ಡಿಐಜಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.