ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.
ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಉಗ್ರರು ದಾಳಿನಡೆಸುವ ಎಚ್ಚರಿಕೆ ನೀಡಿದ್ದರು. ಅದರಂತೆಯೇ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನಕ್ಕೆ ಈ ಘಟನೆ ಸವಾಲಾಗಿ ಪರಿಣಮಿಸಿದೆ.