ಬೆಂಗಳೂರು ವಿಧಾನಸಭೆ ಆವರಣದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನದಲ್ಲಿರುವ ಬಿಜೆಪಿ, ಪ್ರಕರಣದಲ್ಲಿ ಬಂಧಿತ ವ್ಯಕ್ತಿಗಳ ಪೈಕಿ ಒಬ್ಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ಆರ್.ಅಶೋಕ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಶಂಕಿತ ಮೊಹಮ್ಮದ್ ಇಲ್ತಾಝ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪ್ತನಾಗಿದ್ದು, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಕೂಡ ರಾಹುಲ್ ಗಾಂಧಿ ಅವರ ಜೊತೆ ಪಾಲ್ಗೊಂಡಿದ್ದ ಎಂದು ಆರೋಪಿಸಿದ್ದಾರೆ.
ಈ ಗಂಭೀರ ಪ್ರಕರಣದ ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಈ ದೋಸ್ತಿಯೇ ಕಾರಣಾನಾ? ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಜನತೆಗೆ ಉತ್ತರಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಶಂಕಿತ ಮೊಹಮ್ಮದ್ ಇಲ್ತಾಝ್ ಕಾಂಗ್ರೆಸ್ ನಾಯಕ @RahulGandhi ಅವರ ಅಪ್ತನಾಗಿದ್ದು, ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಕೂಡ ರಾಹುಲ್ ಗಾಂಧಿ ಅವರ ಜೊತೆ ಪಾಲ್ಗೊಂಡಿದ್ದ.
ಈ ಗಂಭೀರ ಪ್ರಕರಣದ ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಈ ದೋಸ್ತಿಯೇ ಕಾರಣಾನಾ? ಸಿಎಂ… pic.twitter.com/qyjnInWFZd
— R. Ashoka (ಮೋದಿ ಅವರ ಕುಟುಂಬ) (@RAshokaBJP) March 5, 2024