ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಭಾರತ ಪಾಕಿಸ್ತಾನ ಗಾಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಗುರುವಾರವೂ ಭಾರತ ಪಾಕ್ ಸೈನಿಕರ ಗುಂಡಿನ ಚಕಮಕಿ ನಡೆದಿದೆ. ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುಮಾರು 43 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗುರುದ್ವಾರ ಹಾಗೂ ಮನೆಗಳು, ವಾಹನಗಳು ಮತ್ತು ವಿವಿಧ ಕಟ್ಟಡಗಳ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.






















































