ದೆಹಲಿ: ಈ ಬಾರಿಯ ಗಣರಾಜ್ಯೋತ್ಸವದಲ್ಲೂ ಕರುನಾಡಿನ ವೈಭವ ಮೇಲೈಸಲಿದೆ. ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
— Basavaraj S Bommai (@BSBommai) January 15, 2022