ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಅಸಲಿ ಸತ್ಯ ಬಹಿರಂಗವಾಗಬೇಕಾದರೆ ಬಂಧಿತ ಆರೋಪಿಗಳೆಲ್ಲರನ್ನೂ ಮಂಪರು ಪರೀಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಅಗತ್ಯ ಬಿದ್ದರೆ ಎಡಿಜಿಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುವುದು ಎಂಬ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಡಿಕೆಶಿ, ‘ ಕೇವಲ ಎಡಿಜಿಪಿ ಮಾತ್ರವಲ್ಲ, ಬಂಧಿತ ಎಲ್ಲ ಆರೋಪಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು. ಅಭ್ಯರ್ಥಿಗಳಿಗೆ ಹಣ ಎಲ್ಲೆಲ್ಲಿ ಹರಿದು ಹೋಗಿದೆ ಎಂಬ ಮಾಹಿತಿ ಇದೆ. ಯಾವ ಸಚಿವರು, ಅಧಿಕಾರಿಗಳು ಹಣ ಪಡೆದಿದ್ದಾರೆ ಎಂದು ತಿಳಿದಿದೆ ಎಂದರು.
ಎಡಿಜಿಪಿಯ ಹೇಳಿಕೆಯನ್ನು ಸೆಕ್ಷನ್ 164 ಪ್ರಕಾರ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಯಾಕೆ ದಾಖಲಿಸುತ್ತಿಲ್ಲ ಏಕೆ?’ ಎಂದು ಶಿವಕುಮಾರ್ ಪ್ರಶ್ನಿಸಿದರು.


















































