ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪಿ ಕಲಬುರ್ಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ಅವರು ಸ್ಪಷ್ಟಪಡಿಸಿದ್ದಾರೆ.
ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗವಹಿಸಿದ್ದರೆ ಅದನ್ನು ಪಕ್ಷ ಮತ್ತು ಸರಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಈ ವಿಷಯದ ಕುರಿತು ಸಿಒಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ.