ಬೆಂಗಳೂರು: ಪಿಎಸ್ ಐ ಅಕ್ರಮದಲ್ಲಿ ಬಿಜೆಪಿ ಶಾಸಕ ಬಸವರಾಜ ದಡಸಗೂರು ಅವರದು ಒಂದು ಸಣ್ಣ ಕೈ. ಅವರ ಮಾತಿನಂತೆ ಸರ್ಕಾರ ಎಂದರೆ ಯಾರು? ಸರ್ಕಾರ ಎಂದರೆ ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು. ಇದಕ್ಕಾಗಿಯೇ ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಙದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಿಂದ ಪ್ರಯೋಜನ ಆಗುವುದಿಲ್ಲ. ಸತ್ಯ ಒಂದೊಂದಾಗಿ ಹೊರ ಬರುತ್ತಿದೆ. ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರನ್ನು ಹೆದರಿಸಲು ನೋಟೀಸ್ ನೀಡಿದ್ದರು. ವಿಶ್ವನಾಥ್, ಯತ್ನಾಳ್ ಹಾಗೂ ಬಸವರಾಜ ಅವರು ಸತ್ಯ ಹೇಳಿದ್ದರೂ ಈಗ ಸುಮ್ಮನಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿಗಳೇ ನಿಮ್ಮಿಂದ ಸರ್ಕಾರ ನಡೆಸಲು ಆಗುತ್ತಿಲ್ಲ. ಸಚಿವ ಮಾಧುಸ್ವಾಮಿಗಳು ಹೇಳಿದಂತೆ ನೀವು ಸರ್ಕಾರವನ್ನು ತಳ್ಳುತ್ತಿದ್ದೀರಿ ಅಷ್ಟೇ. ಇನ್ನೂ ನಾಲ್ಕು ಜನರನ್ನು ಸೇರಿಸಿಕೊಂಡು ಸರ್ಕಾರವನ್ನು ತಳ್ಳಿ ಎಂದವರು ತರಾಟೆಗೆ ತೆಗೆದುಕೊಂಡರು.