ಪುಣೆ: ಮಹಿಳೆ ಮೇಲೆ ಬಸ್ಸಿನಲ್ಲೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.
ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂಬಾತ ಆರೋಪಿಯಾಗಿದ್ದು ಆತನನ್ನು ಶಿರೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಠಾಣೆ ಸಮೀಪವೇ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು.
ಈ ಪ್ರಕರಣ ಬೇಧಿಸಲು ಪೊಲೀಸರು ಮಹಾರಾಷ್ಟ್ರದಾದ್ಯಂತ ಒಟ್ಟು 13 ತಂಡಗಳನ್ನು ನಿಯೋಜಿಸಿದ್ದರು. ಜೊತೆಗೆ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನೂ ಕೂಡ ಪುಣೆ ಪೊಲೀಸರು ಘೋಷಿಸಿದ್ದರು. ಈ ನಡುವೆ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.