ಬೆಂಗಳೂರು: ನಟ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆಸ್ಪತ್ರೆಗಳಲ್ಲಿ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ,
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ಹಠಾತ್ ಹೃದಯ ಸಂಬಂಧ ಸಾವುಗಳನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ ಎಇಡಿ ಗಳನ್ನು ಸ್ಥಾಪಿಸಲಾಗುವುದೆಂದು ಘೋಷಿಸಿದರು. ಈ ವ್ಯವಸ್ಥೆ ಕಲ್ಪಿಸಲು ಆರು ಕೋಟಿ ರೂಪಾಯಿ ಅನುದಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.




















































