ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.
ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿಗಳು ಶುಭಾಶಯಗಳನ್ನು ಕೋರಿದ ಅವರು, ಪುನೀತ್ ಅವರಿಗೆ ಮರಣೋತ್ತರ ವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ: ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.