ಬೆಳಗಾವಿ: ಇರಿತಕ್ಕೊಳಗಾಗಿರುವ ಪೃಥ್ವಿ ಸಿಂಗ್ ಅವರ ದೂರನ್ನು ತಿರುಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ದೂರನ್ನು ತಮಗೆಷ್ಟು ಬೇಕು ಅಷ್ಟು ತಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ಇಲ್ಲ ಹಾಗಾಗಿ ಪೃಥ್ವಿ ಸಿಂಗ್‌ಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದವರು ತಿಳಿಸಿದ್ದಾರೆ.







































































