ಬೆಂಗಳೂರು: ಲೈಂಗಿಕ ಶೋಷಣೆಯ ಆರೋಪಕ್ಕೆ ಗುರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರುಗೆ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಪ್ರಕರಣ ದಾಖಲಾದ ದಿನದಿಂದ ತಲೆ ಮರೆಸಿಕೊಂಡು ವಿದೇಶದಲ್ಲಿ ಅಡಗಿರುವ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡಿದರೆ ಭಾರತಕ್ಕೆ ಮರಳುವುದು ಅನಿವಾರ್ಯವಾಗುತ್ತದೆ ಹಾಗೂ ದೇಶವೇ ಕಂಡು ಕೇಳರಿಯದ ಪ್ರಕರಣದ ತನಿಖೆಗೆ ಸಹಕಾರಿಯಾಗುತ್ತದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.
ಲೈಂಗಿಕ ಶೋಷಣೆಯ ಆರೋಪಿ ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ @siddaramaiah ಅವರು ಪ್ರಧಾನಿ @narendramodi ಅವರಿಗೆ ಪತ್ರ ಬರೆದಿದ್ದಾರೆ.
ಪ್ರಕರಣ ದಾಖಲಾದ ದಿನದಿಂದ ತಲೆ ಮರೆಸಿಕೊಂಡು ವಿದೇಶದಲ್ಲಿ ಅಡಗಿರುವ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡಿದರೆ ಭಾರತಕ್ಕೆ ಮರಳುವುದು… pic.twitter.com/gBoiE9XZtX
— Karnataka Congress (@INCKarnataka) May 23, 2024
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಪಕ್ಷ, ಸಿಎಂ ಬರೆದ ಪತ್ರಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತದೆಯೇ ಎನ್ನುವುದನ್ನು ಕಾದು ನೋಡಬೇಕು ಎಂದಿದೆ.























































