ಬೆಂಗಳೂರು: ಬೆಂಗಳೂರು: ದಕ್ಷಿಣ ರಾಜ್ಯಗಳ ಪ್ರತ್ಯೇಕ ರಾಷ್ಟ್ರ ಬೇಡಿಕೆ ಕುರಿತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆಂಬ ವಿಚಾರ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ.
ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದರು.
ಭಾನುವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ನುಗ್ಗಲೆತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.