ಬೆಂಗಳೂರು: ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಇದೇ 19ರಂದು ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಏರೋಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಜೀ ಅವರು ಬರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರನ್ನು ಸ್ವಾಗತಕ್ಕೆ ಬಳಸಿಕೊಳ್ಳುವ ಕುರಿತು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಮುಖರ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.



















































