ಸೆ. 2 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ – ಜಿಲ್ಲಾ ಬಿಜೆಪಿ ವತಿಯಿಂದ ಪೂರ್ವ ಸಿದ್ಧತಾ ಸಭೆ – ಶಾಸಕ ರಘುಪತಿ ಭಟ್ ಭಾಗಿ..
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು ಅಂದು ನಡೆಯಲಿರುವ ಸಮಾವೇಶದ ಪೂರ್ವ ಸಿದ್ಧತಾ ಸಭೆ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಸಹಿತ ಅನೇಕ ನಾಯಕರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.