ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹೊರತಂದಿರುವ ಒಂದು ವರ್ಷದ ಸಾಧನೆಯ ಪುಸ್ತಕ ‘ಹೆಜ್ಜೆ ಗುರುತು’ ಬಿಡುಗಡೆ ಮಾಡಿದರು.
ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಕೆ.ಎಸ್.ಟಿ. ಡಿ.ಸಿ ಅಧಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

























































