ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ರೈತಾಪಿ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಈ ಹಿನ್ನೆಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಬಿಜೆಪಿ ಸಮೀಕ್ಷೆಗೆ ಮುಂದಾಗಿದೆ. ಬಿಜೆಪಿ ನಾಯಕರು ಮಂಗಳವಾರದಿಂದ ವಿವಿಧ ತಂಡಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಈ ಸಂಬಂಧ ನಾಯಕರ ವಿವಿಧ ತಂಡಗಳನ್ನು ರಚಿಸಲಾಗಿದೆ.
ಬಿಜೆಪಿ ನಾಯಕರ ತಂಡ ಹೀಗಿದೆ:
ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.
ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ ಅತಿವೃಷ್ಠಿ ಹಾನಿ ಬಗ್ಗೆ ಅಧ್ಯಯನ ನಡೆಸಲಿದೆ.
ಮಾಜಿ ಸಚಿವ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಲಿದೆ.
ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಮಾಜಿ ಮಂತ್ರಿ ಬಿ.ಶ್ರೀರಾಮುಲು ಮುಂದಾಳತ್ವದ ತಂಡ ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.