ಕೋಲಾರ: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮಳೆಯಾಗುತ್ತಿದ್ದು, ಜನರು ಪರದಾಡುವಂತಾಗಿದೆ, ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ನಡುವೆ ಮಳೆ ಹಿನ್ನೆಲೆಯಲ್ಲಿ ಕೋಲಾರ, ಮೈಸೂರು , ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.