ಬಳ್ಳಾರಿ: ಲೋಕಸಭಾ ಚುನಾವಣೆ ಬೆನ್ನಲ್ಲೇ ಮೇಲ್ಮನೆ ಚುನಾವಣೆ ಎದುರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಸವಾಲು ಎದುರಾಗಿದೆ. ಇದೇ ವೇಳೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾ ಪ್ರತಾಪರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷ ಉಚ್ಛಾಟಿಸಿದೆ.
ವಿಧಾನ ಪರಿಷತ್ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿಯವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ.