ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
57ನೇ ಸಿಟಿ ಸಿವಿಲ್ ನ್ಯಾಯಾಲಯವು ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾಗಿ 100 ದಿನಗಳ ಬಳಿಕ ನಟ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.




















































