ಹೊಸದಿಲ್ಲಿ: ದೆಹಲಿ ಅಬಕಾರಿ ಹಗರಣದಲ್ಲಿ ತಮ್ಮನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಕೇಜ್ರಿವಾಲ್ ಅಲ್ಲಿಸಿದ್ದ ಅರ್ಜಿ ಕುರಿತಂತೆ ಹೈಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ನಿಗದಿಯಂತೆ ಮಂಗಳವಾರ ತೀರ್ಪು ಪ್ರಕಟಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಈ ನಡುವೆ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬುಧವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.























































